News

E.g., 16/06/2021
Kshetra Samachara
Kshetra Samachara
Subject ಮಂಗಳೂರು: ಸ್ಮಾರ್ಟ್ ಸಿಟಿ ಕಾಮಗಾರಿ ವೇಳೆ ಹಳೆ ಬಾವಿ ಪತ್ತೆ!

ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ವೇಳೆ ನೆಲಸಮಗೊಂಡಿರುವ ನಗರದ ನವಭಾರತ್ ಸರ್ಕಲ್ ನಲ್ಲಿ ಹಳೆಯ ಬಾವಿಯೊಂದು ಪತ್ತೆಯಾಗಿದೆ!

ಮಂಗಳೂರಿನ ಹೃದಯ ಭಾಗದಲ್ಲಿರುವ ನವಭಾರತ್ ಸರ್ಕಲ್ ನ್ನು ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನೆಲೆಯಲ್ಲಿ ಹೊಸದಾಗಿ ನಿರ್ಮಿಸಲು ನಿನ್ನೆ ರಾತ್ರಿ ನೆಲಸಮ ಮಾಡಲಾಗಿತ್ತು. ಇಂದು ಕಾಮಗಾರಿ ಕೆಲಸ ನಡೆಯುತ್ತಿದ್ದ ವೇಳೆ ಸಿಮೆಂಟ್ ಸ್ಲ್ಯಾಬ್ ನ ಕೆಳಗೆ ಬಾವಿಯೊಂದು ಪತ್ತೆಯಾಗಿದೆ.
ಇದು ಸುಮಾರು 20 ವರ್ಷಗಳ ಹಿಂದಿನ ಬಾವಿ ಎಂದು ಅಂದಾಜಿಸಲಾಗಿದೆ. ಬಾವಿಯನ್ನು ಕಾಂಕ್ರೀಟ್ ಸ್ಲ್ಯಾಬ್ ಹಾಕಿ ಮುಚ್ಚಲಾಗಿತ್ತು, ಕಾಮಗಾರಿ ವೇಳೆ ಮಣ್ಣು ಕುಸಿದು ಬಾವಿ ಕಾಣಿಸಿಕೊಂಡಿದೆ.
...
Category: Infrastructure
Post date: 12-06-2121
City: Udupi, Mangalore

Kshetra Samachara
PublicNext-473927-513034-Udupi-Mangalore-Politics-COVID-node
Subject ಬೈಂದೂರು: ಕೊರೊನಾ ವಾರಿಯರ್ಸ್ ಕಾರ್ಯ ಶ್ಲಾಘನೀಯ: ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ

ಬೈಂದೂರು: 50ಕ್ಕಿಂತ ಹೆಚ್ಚು ಕೊರೊನಾ ಸೋಂಕಿತರು ಇರುವ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶವನ್ನು ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದ್ದು, ಉತ್ತಮ ರೀತಿಯಲ್ಲಿ ಲಾಕ್‌ಡೌನ್ ವ್ಯವಸ್ಥೆ ಮಾಡಿರುವುದಕ್ಕೆ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಸಿದ್ಧತೆಗಳನ್ನು ಪರಿಶೀಲಿಸಿ ಮಾಹಿತಿ ಪಡೆದ ಶಾಸಕರು, ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯತ್ ಕೈಗೊಂಡ ಕ್ರಮಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಅನ್‌ಲಾಕ್ ಆದ ಬಳಿಕ ಜನರು ಮೈಮರೆಯದೆ ಕಾಲಕಾಲಕ್ಕೆ ಸರ್ಕಾರದ...
Category: Politics, COVID
Post date: 12-06-2121
City: Udupi, Mangalore

Kshetra Samachara
PublicNext--512991--node-nid
Subject ಉಡುಪಿ: ಉಚಿತ ಹೆರಿಗೆ ಆಸ್ಪತ್ರೆಯ ನಿರ್ವಹಣೆ ಕೈಬಿಟ್ಟ ಬಿ.ಆರ್​.ಶೆಟ್ಟಿ- ಸಂಕಷ್ಟಕ್ಕೆ ಸಿಲುಕಿದ 250 ಸಿಬ್ಬಂದಿ

ಉಡುಪಿ: ಉಚಿತ ಹೆರಿಗೆಯ ಸರ್ಕಾರಿ ಆಸ್ಪತ್ರೆಯ ನಿರ್ವಹಣೆಯನ್ನು ಕೈಬಿಡುವುದಾಗಿ ಅಬುದಾಬಿಯ ಉದ್ಯಮಿ ಬಿ.ಆರ್. ಶೆಟ್ಟಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಉದ್ಯಮಿ ಬಿ.ಆರ್. ಶೆಟ್ಟಿ ಅವರು ಸರ್ಕಾರದ ಹೆರಿಗೆ ಆಸ್ಪತ್ರೆಯನ್ನು ತಾನು ನಡೆಸುತ್ತೇನೆ ಎಂದು ತಾನೇ ಮುಂದೆ ಬಂದಿದ್ದರು. ಹೀಗಾಗಿ 200 ಬೆಡ್​ನ ಉಚಿತ ಹೆರಿಗೆಯ ಸರ್ಕಾರಿ ಆಸ್ಪತ್ರೆಯನ್ನು ಖಾಸಗಿ ನಿರ್ವಹಣೆ ಮಾಡುವುದು ಮತ್ತು ಇದಕ್ಕೆ ಬದಲಾಗಿ 400 ಬೆಡ್​ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನೂರಾರು ಕೋಟಿ ಮೌಲ್ಯದ ಸರ್ಕಾರದ 4.7 ಎಕರೆ ಭೂಮಿಯನ್ನು ಬಿ.ಆರ್. ಶೆಟ್ಟಿ ಅವರಿಗೆ ಕೊಡುವುದು ಎಂದು ಎಂಓಯು ಆಗಿತ್ತು. ಆದರೆ ಈಗ ಆರ್ಥಿಕ ಸಂಕಷ್ಟದಲ್ಲಿ ಇರುವ...
Category: Health & Fitness, Government
Post date: 12-06-2121
City: Udupi, Mangalore

Public News
PublicNext--513054--node-nid
Subject ರಾಜ್ಯದಲ್ಲಿ ತಗ್ಗಿದ ಕೊರೊನಾ ಅಟ್ಟಹಾಸ: ಇಂದು 9,785 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಕೊಂಚ ಇಳಿಮುಖವಾಗಿದ್ದು, ಕಳೆದ 24 ಗಂಟೆಗಳಲ್ಲಿ 9,785 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 144 ಜನ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 21,614 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 25,32,719ಕ್ಕೆ ಏರಿಕೆಯಾಗಿದೆ. ಇನ್ನು 27,57,324 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ ಕೊರೊನಾ ಹರಡುವಿಕೆಯ ಪಾಸಿಟಿವಿಟಿ ದರ 6.61%ಕ್ಕೆ ಇಳಿಕೆಯಾಗಿದೆ. ಇನ್ನು ಮರಣ ಪ್ರಮಾಣ 1.47%ಕ್ಕೆ...
Category: Health & Fitness, COVID
Post date: 12-06-2121

Public News
Public News
Subject ಅಪ್ರಾಪ್ತೆ ಸಾವಿನ ಸುತ್ತ ಅನುಮಾನಗಳ ಹುತ್ತ: ನದಿ ದಡದಲ್ಲಿ ಶವ ಪತ್ತೆ

ಬೆಳಗಾವಿ- ಮೂಡಲಗಿ ಪಟ್ಟಣದಲ್ಲಿ ಮೇ. 23ರಂದು ಶ್ರೀಕಾಂತ ಶಂಕರ ನಾಯಕ (21) ಎಂಬಾತ ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದ ವಿಡಿಯೋ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಈ ಯುವಕ ಹಿಂಡಲಗಾ ಜೈಲು ಪಾಲಾಗಿ 15 ದಿನಗಳ ಕಳೆಯುವ ಮುಂಚೆಯೇ ಆ ಅಪ್ರಾಪ್ತೆ ಸಾವನ್ನಪ್ಪಿದ್ದಾಳೆ.

ಮೂಡಲಗಿಯ ಶೃತಿ (17) ಎಂಬಾಕೆ ಮೃತ ದುರ್ದೈವಿ. ಈಕೆ ಗುರುವಾರ ರಾತ್ರಿ ಮನೆಯಿಂದ ಹೊರಗೆ ಹೋಗಿ ಶವವಾಗಿ ಪತ್ತೆಯಾಗಿದ್ದಾಳೆ ಎಂಬ ಮಾತು ಹರಿದಾಡುತ್ತಿರುವ ಹಿನ್ನಲೆ, ಪೊಲೀಸ್ ಅಧಿಕಾರಿಗಳು ಕೆಲವು ಸ್ಥಳದಲ್ಲಿ ಪರಿಶೀಲನೆ ನಡೆಸಿದರು.
ಆದರೆ ಆಕೆಯ ಶವ ಶುಕ್ರವಾರ ಬೆಳಗ್ಗೆ ಕುಲಗೋಡ ಪೊಲೀಸ್ ಠಾಣೆಯ ವ್ಯಾಪ್ತಿಯ ಸುಣಧೋಳಿ...
Category: Crime
Post date: 12-06-2121

Kshetra Samachara
PublicNext-473898-512982-Udupi-Health-and-Fitness-COVID-node
Subject ಉಡುಪಿ: ಕಟ್ಟು ನಿಟ್ಟಾಗಿ ಅನ್‌ಲಾಕ್ ಮಾರ್ಗಸೂಚಿ ಅನುಷ್ಠಾನಗೊಳಿಸಿ; ಡಿಸಿ

ಉಡುಪಿ: ಜಿಲ್ಲೆಯಲ್ಲಿ ಜೂನ್ 14ರಿಂದ ಪ್ರಾರಂಭವಾಗುವ ಅನ್‌ಲಾಕ್ ಅವಧಿಯಲ್ಲಿ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಚಟುವಟಿಕೆಗಳು ಮಾತ್ರ ನಡೆಯಲು ಅನುಮತಿ ನೀಡಿ. ಮಾರ್ಗಸೂಚಿಗಳ ಉಲ್ಲಂಘನೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಎಲ್ಲ ತಹಶೀಲ್ದಾರ್‌ಗಳು ಮತ್ತು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ನಿರ್ಬಂಧಗಳನ್ನು ಎಲ್ಲ ಅಧಿಕಾರಿಗಳು ಮತ್ತು ಪಂಚಾಯತ್‌ಗಳ ಸಹಕಾರದಿಂದ ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದರ ಫಲವಾಗಿ ಜಿಲ್ಲೆಯಲ್ಲಿ ಸೋಂಕು ಹರಡುವುದು ಗಣನೀಯವಾಗಿ ಕಡಿಮೆಯಾಗಿದೆ. ಇದೇ ಕಾರಣದಿಂದ ಸರ್ಕಾರ ಜಿಲ್ಲೆಯಲ್ಲಿ...
Category: Health & Fitness, COVID
Post date: 12-06-2121
City: Udupi

Public News
PublicNext--513042--node-nid
Subject ಕಾಶ್ಮೀರದಲ್ಲಿ ಉಗ್ರರ ದಾಳಿ: ಇಬ್ಬರು ಯೋಧರು ಹುತಾತ್ಮ- ಮೂವರು ನಾಗರಿಕರ ಸಾವು

ಶ್ರೀನಗರ: ದಕ್ಷಿಣ ಕಾಶ್ಮೀರದ ಸೊಪೋರ್ ಬಳಿ ನಡೆದ ಉಗ್ರರ ದಾಳಿಯಲ್ಲಿ ಭಾರತೀಯ ಸೇನೆಯ ಇಬ್ಬರು ಹುತಾತ್ಮರಾಗಿದ್ದು, ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯ ಸೊಪೋರ್​ನಲ್ಲಿ ಉಗ್ರರು, ಜಮ್ಮು- ಕಾಶ್ಮೀರ ಪೊಲೀಸರು ಸೇರಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್​​ಪಿಎಫ್​) ಯೋಧರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು. ಸೊಪೋರ್​​​​ ಮುಖ್ಯ ಚೌಕದ ಬಳಿ ಘಟನೆ ನಡೆದಿದೆ. ಈ ಘಟನೆಯನ್ನು ಪೊಲೀಸ್​ ಅಧಿಕಾರಿ ಸೇರಿ ಮೂವರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಇಂಡಿಯನ್ ಆರ್ಮಿಯ 92 ಬೆಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಸೇನೆಯ ಅಧಿಕಾರಿಗಳು...
Category: Crime
Post date: 12-06-2121

Kshetra Samachara
Kshetra Samachara
Subject ಉಡುಪಿಯಲ್ಲಿ ಜೂ.14ರಿಂದ ಏನೇನು ಸೇವೆಗಳಿವೆ? ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಹೊಸ ಪ್ರಕರಣಗಳು ಮತ್ತು ಪಾಸಿಟಿವ್ ದರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಕೆಲವೊಂದು ನಿಯಮಗಳನ್ನು ಸಡಿಲಗೊಳಿಸಿ ಆದೇಶ ಹೊರಡಿಸಿದೆ.

ಈ ಸಂಬಂಧ ಮಾತನಾಡಿರುವ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲೆಯಲ್ಲಿ ಪಾಸಿಟಿವ್ ದರ ಶೇ.6ಕ್ಕೆ ಬಂದು ನಿಂತಿದೆ. ಹೀಗಾಗಿ ಜೂನ್ 14ರಿಂದ ಕೆಲವೊಂದು ರಿಯಾಯಿತಿಗಳಿವೆ. ಬೆಳಿಗ್ಗೆ 6ರಿಂದ 2 ಗಂಟೆ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇದೆ. ಕಟ್ಟಡ ಸಾಮಗ್ರಿಗಳ ಅಂಗಡಿ ತೆರೆಯಬಹುದು. ಎಲೆಕ್ಟ್ರಾನಿಕ್ಸ್ ಅಂಗಡಿಗಳು ತೆರೆಯಬಹುದು. ಶೇ.50 ಕೆಲಸಗಾರರೊಂದಿಗೆ ಕಾರ್ಖಾನೆಗಳು, ಗೇರು ಬೀಜ ಫ್ಯಾಕ್ಟರಿಗಳು ತೆರೆಯಬಹುದು...
Category: Health & Fitness, COVID
Post date: 12-06-2121
City: Udupi, Mangalore

Kshetra Samachara
Kshetra Samachara
Subject ಉಡುಪಿ: ಊರೆಲ್ಲ ಕಾರ್ಯಕ್ರಮ ಮಾಡಂಗಿಲ್ಲ, ಆದ್ರೂ ಶಾಸಕರ ಕಾರ್ಯಕ್ರಮದಲ್ಲಿ ಜನವೋ ಜನ!

ಉಡುಪಿ: ಶಾಸಕ ರಘುಪತಿ ಭಟ್ ಹಡಿಲು ಭೂಮಿಯಲ್ಲಿ ಕೃಷಿ ಕಾರ್ಯ ಮಾಡುವ ಆಂದೋಲನವನ್ನೇ ಹಮ್ಮಿಕೊಂಡಿದ್ದಾರೆ. ಇದು ಉತ್ತಮ ಕಾರ್ಯಕ್ರಮ ಕೂಡ. ಆದರೆ, ಕೋವಿಡ್ ಸಂದರ್ಭ ಇದನ್ನೆಲ್ಲ ಮಾಡಬಹುದೇ? ಜನರ ಮಿತಿ ಇಲ್ಲವೇ? ಸಾಮಾಜಿಕ ಅಂತರ ಇಲ್ಲದೆ ಇದನ್ನು ಮಾಡಬಹುದೇ ಎಂಬ ಪ್ರಶ್ನೆ ಎದುರಾಗಿದೆ.

ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಹಡಿಲು ಬಿದ್ದ ಭೂಮಿಯಲ್ಲಿ ಕೃಷಿ ಮಾಡುವ ಶಾಸಕರ ಕಾರ್ಯಕ್ರಮಕ್ಕೆ ಜನರ ಮಿತಿಯೇ ಇಲ್ಲ, ಸಾಮಾಜಿಕ ಅಂತರವಂತೂ ಇಲ್ಲವೇ ಇಲ್ಲ!

ಇಂದು ಕೂಡ ಶಾಸಕ ರಘುಪತಿ ಭಟ್ ಹಡಿಲು ಬಿದ್ದ ಕೃಷಿ ಭೂಮಿಯಲ್ಲಿ ನಾಟಿ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಪಂಚಾಯಿತಿ ಸಿಇಒ ನವೀನ್ ಭಟ್,...
Category: Politics
Post date: 12-06-2121
City: Udupi, Mangalore

Pages