ER NEWS

News Subject: 
ಮೈತ್ರಿ ಕಡೆಗಣಿಸಿದ್ದೇ ಸೋಲಿಗೆ ಕಾರಣ: ಯೋಗಿ ಆದಿತ್ಯನಾಥ್‌
Upload Image: 
Body: 

ಉತ್ತರ ಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದೆ. ಜನರ ತೀರ್ಮಾನವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ.

ಚುನಾವಣೆ ಫಲಿತಾಂಶ ನಂತರ ಯೋಗಿ ಆದಿತ್ಯನಾಥ್‌ ಪ್ರತಿಕ್ರಿಯೆ ನೀಡಿದ್ದಾರೆ.

ಉಪ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ಸಮಾಜವಾದಿ ಪಕ್ಷ ಮತ್ತು ಬಹು ಜನ ಸಮಾಜ ಪಕ್ಷ ಮೈತ್ರಿ ಮಾಡಿಕೊಂಡಿತ್ತು. ಇದನ್ನು ನಾವು ಗಂಭೀರವಾಗಿ ಪರಿಗಣಿಸಲಿಲ್ಲ. ಇದರಿಂದ ಸೋಲನುಭವಿಸಬೇಕಾಯಿತು ಎಂದು ಯೋಗಿ ವಿವರಿಸಿದರು.

ಜನರ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ. ಗೆದ್ದ ಇಬ್ಬರೂ ಸಂಸದರಿಗೆ ಅಭಿನಂದನೆಗಳು. ಅವರು ರಾಜ್ಯದ ಅಭಿವೃದ್ಧಿಗೆ ಶ್ರಮ ವಹಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ.

Reach Count: 
1