Public News
ವಿಜಯಪುರ: ಖ್ಯಾತ ವೈದ್ಯ, ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯ ಉಪಕುಲಪತಿ ಡಾ.ಎಂ.ಎಸ್. ಬಿರಾದಾರ ಉಕ್ಕಲಿ (65) ಬುಧವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೊರೊನಾ ಸೋಂಕಿತರ ಸೇವೆ ಮಾಡುತ್ತಿದ್ದ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಸೋಂಕಿನಿಂದ ಗುಣಮುಖಗೊಂಡಿದ್ದ ಅವರು ವಿಜಯಪುರದ ಮನೆಯಲ್ಲಿ ಹೋಂ ಕ್ವಾರೆಂಟೈನ್ ಆಗಿದ್ದರು. ನಂತರ ತೀವ್ರ ಹೃದಯಾಘಾತ ಸಂಭವಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳವಾರ ಸೊಲ್ಹಾಪುರದಿಂದ ಏರ್ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಇಬ್ಬರು ಸಹೋದರರು ಹಾಗೂ ಒಬ್ಬ ಸಹೋದರಿ ಇದ್ದಾರೆ.
ಡಾ. ಎಂ. ಎಸ್. ಬಿರಾದಾರ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದವರು. ಉಕ್ಕಲಿಯ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು, ಬಿ.ಎಲ್.ಡಿ.ಇ ನ್ಯೂ ಇಂಗ್ಲಿಷ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪಡೆದು, ಹುಬ್ಬಳಿಯ ಕರ್ನಾಟಕ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿನ್ನದ ಪದಕದೊಂದಿಗೆ ಎಂ.ಬಿ.ಬಿ.ಎಸ್ ಪದವಿ ಪೂರ್ಣಗೊಳಿಸಿದ್ದರು.
