Public News
News Subject:
ಕಂದಕಕ್ಕೆ ಉರುಳಿದ ಕಾರು: ನಾಲ್ವರು ಯುವತಿಯರು ಸೇರಿ ಐವರ ದಾರುಣ ಸಾವು
Top News Rank:
2
Is Sensitive:
No
Is Special NEWS:
0
Send Notification:
0
Body:
ಗಾಂಧಿನಗರ: ವಾಹನವೊಂದಕ್ಕೆ ಡಿಕ್ಕಿ ಹೊಡೆದ ಕಾರು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ನಾಲ್ವರು ಯುವತಿಯರು ಸೇರಿ ಐವರು ಮೃತಪಟ್ಟ ಘಟನೆ ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿ ನಡೆದಿದೆ.
ವೇಗವಾಗಿ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ರಸ್ತೆಯಿಂದ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದವರನ್ನು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಾಲ್ವರು ಯುವತಿಯರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಜತೆಗೆ ಅಪಘಾತಕ್ಕೆ ಕಾರಣವಾಗಿರುವ ಅಪರಿಚಿತ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರೆಲ್ಲರೂ ಖಾಸಗಿ ಕಂಪನಿಯ ಸಿಬ್ಬಂದಿ ಆಗಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
Upload Image:

Category:
Crime
Accident
Reach Count:
28640
State:
Karnataka
In Organic Like Count:
0
SEO Keywords:
Gujarat, Bharuch, Car, Accident,,Crime,Accident