Kshetra Samachara

Local News Subject: 
ಹುಬ್ಬಳ್ಳಿ: ತೈಲ ಬೆಲೆ ಏರಿಕೆ ವಿರುದ್ಧ ಸಿಡಿದೆದ್ದ ಕೈ ಕಾರ್ಯಕರ್ತರು
City: 
Hubballi-Dharwad
Video Thumbnail: 
PublicNext--512689--node-nid
Category: 
Politics
Body: 

ಹುಬ್ಬಳ್ಳಿ- ಕೇಂದ್ರ ಸರ್ಕಾರ ತೈಲ ಬೆಲೆ ಏರಿಕೆ ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ನಗರದ ಹೊಸೂರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತೈಲ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಕೊರೋನಾದಂತಹ ಸಂಕಷ್ಟ ಕಾಲದಲ್ಲಿ ಕೇಂದ್ರ ಸರ್ಕಾರ ಪದೇ ಪದೇ ತೈಲ ಬೆಲೆ ಏರಿಕೆ ಮಾಡಿ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ದೂರಿದರು. ಈ ಕೂಡಲೇ ತೈಲ ಬೆಲೆಯನ್ನು ಇಳಿಕೆ ಮಾಡಬೇಕು. ಇಲ್ಲದಿದ್ದರಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದೂ ಪ್ರತಿಭಟನಾನಿರತರು ಎಚ್ಚರಿಕೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೀತ್ ಶಾ ವಿರುದ್ಧ ಕಿಡಿಕಾರಿದ ಕಾರ್ಯಕರ್ತರು, ಕೆಲಕಾಲ ರಸ್ತೆ ತಡೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Reach Count: 
29987