Error message

  • Notice: Constant PUBLIC_NEXT_APP_USER_TRENDING_VIDEOS_PARAMETER_DURATION_IN_SECONDS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).
  • Notice: Constant TRENDING_VIDEO_MIN_LENGTH_IN_SECS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).

Public News

News Subject: 
ರಾಜ್ಯದಲ್ಲಿ ತಗ್ಗಿದ ಕೊರೊನಾ ಅಟ್ಟಹಾಸ: ಇಂದು 9,785 ಜನರಿಗೆ ಸೋಂಕು
Upload Image: 
PublicNext--513054--node-nid
Category: 
Health & Fitness
COVID
Body: 

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಕೊಂಚ ಇಳಿಮುಖವಾಗಿದ್ದು, ಕಳೆದ 24 ಗಂಟೆಗಳಲ್ಲಿ 9,785 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 144 ಜನ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 21,614 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 25,32,719ಕ್ಕೆ ಏರಿಕೆಯಾಗಿದೆ. ಇನ್ನು 27,57,324 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ ಕೊರೊನಾ ಹರಡುವಿಕೆಯ ಪಾಸಿಟಿವಿಟಿ ದರ 6.61%ಕ್ಕೆ ಇಳಿಕೆಯಾಗಿದೆ. ಇನ್ನು ಮರಣ ಪ್ರಮಾಣ 1.47%ಕ್ಕೆ ಇಳಿಕೆಯಾಗಿದೆ.

ರಾಜ್ಯಾದ್ಯಂತ 1,48,027 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ರಾಜ್ಯದಲ್ಲಿ ಈವರೆಗೂ 27,57,324 ಜನರಿಗೆ ಸೋಂಕು ತಗುಲಿದ್ದು, 32,788 ಮಂದಿ ಬಲಿಯಾಗಿದ್ದಾರೆ.

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 2,454 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 11,95,340ಕ್ಕೆ ಏರಿಕೆಯಾಗಿದೆ. 5,398 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 10,91,260ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 21 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,284 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 88,795 ಸಕ್ರಿಯ ಪ್ರಕರಣಗಳಿವೆ.

Reach Count: 
41354