Kshetra Samachara
Local News Subject:
ಮಂಗಳೂರು: ಸ್ಮಾರ್ಟ್ ಸಿಟಿ ಕಾಮಗಾರಿ ವೇಳೆ ಹಳೆ ಬಾವಿ ಪತ್ತೆ!
City:
Udupi
Mangalore
Video Thumbnail:
Category:
Infrastructure
Body:
ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ವೇಳೆ ನೆಲಸಮಗೊಂಡಿರುವ ನಗರದ ನವಭಾರತ್ ಸರ್ಕಲ್ ನಲ್ಲಿ ಹಳೆಯ ಬಾವಿಯೊಂದು ಪತ್ತೆಯಾಗಿದೆ!
ಮಂಗಳೂರಿನ ಹೃದಯ ಭಾಗದಲ್ಲಿರುವ ನವಭಾರತ್ ಸರ್ಕಲ್ ನ್ನು ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನೆಲೆಯಲ್ಲಿ ಹೊಸದಾಗಿ ನಿರ್ಮಿಸಲು ನಿನ್ನೆ ರಾತ್ರಿ ನೆಲಸಮ ಮಾಡಲಾಗಿತ್ತು. ಇಂದು ಕಾಮಗಾರಿ ಕೆಲಸ ನಡೆಯುತ್ತಿದ್ದ ವೇಳೆ ಸಿಮೆಂಟ್ ಸ್ಲ್ಯಾಬ್ ನ ಕೆಳಗೆ ಬಾವಿಯೊಂದು ಪತ್ತೆಯಾಗಿದೆ.
ಇದು ಸುಮಾರು 20 ವರ್ಷಗಳ ಹಿಂದಿನ ಬಾವಿ ಎಂದು ಅಂದಾಜಿಸಲಾಗಿದೆ. ಬಾವಿಯನ್ನು ಕಾಂಕ್ರೀಟ್ ಸ್ಲ್ಯಾಬ್ ಹಾಕಿ ಮುಚ್ಚಲಾಗಿತ್ತು, ಕಾಮಗಾರಿ ವೇಳೆ ಮಣ್ಣು ಕುಸಿದು ಬಾವಿ ಕಾಣಿಸಿಕೊಂಡಿದೆ.
ಈ ಹಿಂದೆ ಸ್ಮಾರ್ಟ್ ಸಿಟಿ ಕಾಮಗಾರಿಯ ವೇಳೆ ಹಂಪನಕಟ್ಟೆಯಲ್ಲಿಯೂ ನೂರಾರು ವರ್ಷ ಹಳೆಯದಾದ ಬಾವಿಯೊಂದು ಪತ್ತೆಯಾಗಿತ್ತು.
Reach Count:
7010