Kshetra Samachara
Local News Subject:
ಧಾರವಾಡ: ಜಿಲ್ಲೆಯಲ್ಲಿ ಇಂದು 212 ಜನರಿಗೆ ಕೊರೊನಾ- 501 ಮಂದಿ ಡಿಸ್ಚಾರ್ಜ್
City:
Hubballi-Dharwad
Upload Image:
Category:
Health & Fitness
COVID
Body:
ಧಾರವಾಡ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ತಗ್ಗಿದ್ದು, ದಿನದಿಂದ ದಿನಕ್ಕೆ ಕೇಸ್ಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇಂದು ಕೂಡ ಕಡಿಮೆ ಜನರಿಗೆ ಸೋಂಕು ದೃಢಪಟ್ಟಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ಜಿಲ್ಲೆಯ 212 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 58,750ಕ್ಕೆ ಏರಿಕೆಯಾಗಿದೆ. ಇನ್ನು ಇಂದು 501 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 55,601ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 10 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈವರೆಗೆ ಒಟ್ಟು 1061 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
Reach Count:
58557