Error message

  • Notice: Constant PUBLIC_NEXT_APP_USER_TRENDING_VIDEOS_PARAMETER_DURATION_IN_SECONDS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).
  • Notice: Constant TRENDING_VIDEO_MIN_LENGTH_IN_SECS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).

Kshetra Samachara

Local News Subject: 
ಕಾಪು: ಸಮಾಜ ಸೇವಾ ವೇದಿಕೆಯಿಂದ ಪತ್ರಕರ್ತರಿಗೆ 25 ಸಾವಿರ ಮೌಲ್ಯದ ಕೊಡುಗೆ
City: 
Udupi
Mangalore
Upload Image: 
PublicNext-473953-513086-Udupi-Mangalore-Others-node
Category: 
Others
Body: 

ಕಾಪು: ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪತ್ರಕರ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರಿಗೆ ಕಾಪು-ಕಳತ್ತೂರು ಸಮಾಜ ಸೇವಾ ವೇದಿಕೆ ವತಿಯಿಂದ N95 ಮಾಸ್ಕ್, ಕೊಡೆ, ಸ್ಯಾನಿಟೈಸರ್ ಸೇರಿದಂತೆ ಸುಮಾರು 25 ಸಾವಿರ ಮೌಲ್ಯದ ವಸ್ತುಗಳನ್ನು ಕೊಡುಗೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಸಮಾಜ ಸೇವಾ ವೇದಿಕೆಯ ಅಧ್ಯಕ್ಷ ಮುಹಮ್ಮದ್ ಫಾರೂಕ್ ಚಂದ್ರನಗರ ಮಾತನಾಡಿ, ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ನಡುವೆಯೂ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಸುರಕ್ಷತೆ ಅತ್ಯಗತ್ಯ ಈ ನಿಟ್ಟಿನಲ್ಲಿ ಸಂಸ್ಥೆಯ ವತಿಯಿಂದ ಅಗತ್ಯ ವಸ್ತುಗಳನ್ನು ಕೊಡುಗೆಯಾಗಿ ನೀಡಲು ಸಂತೋಷವಾಗುತ್ತದೆ.ಈಗಾಗಲೇ ದಾನಿಗಳ ಸಹಕಾರದಿಂದ ಸುಮಾರು 5 ಲಕ್ಷಕ್ಕೂ ಅಧಿಕ ಮೊತ್ತದಲ್ಲಿ ಆರ್ಹ ಕುಟುಂಬಗಳಿಗೆ ಆಹಾರ ಸಮಾಗ್ರಿ ಹಾಗು ವೈದ್ಯಕೀಯ ಪರಿಕರಗಳನ್ನು ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ವೇದಿಕೆಯು ಇನ್ನಷ್ಟು ಸಮಾಜಮುಖಿ ಕೆಲಸಗಳನ್ನು ನಿರ್ವಹಿಸಲಿದೆ ಎಂದರು.

ಈ ಸಂದರ್ಭದಲ್ಲಿ ವೇದಿಕೆಯ ಮುಂದಾಳುಗಳಾದ ದಿವಾಕರ ಬಿ ಶೆಟ್ಟಿ,ಶರ್ಫುದ್ದೀನ್,ದಿವಾಕರ ಡಿ ಶೆಟ್ಟಿ,ಕಾಪು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಕೇಶ್ ಕುಂಜೂರು,ಪ್ರದಾನ ಕಾರ್ಯದರ್ಶಿ ಮಹಮ್ಮದ್ ಶಫೀ ಉಚ್ಚಿಲ,ಉಪಾಧ್ಯಕ್ಷರಾದ ವಿಜಯ ಆಚಾರ್ಯ ಉಚ್ಚಿಲ, ಕೋಶಾಧಿಕಾರಿ ಪುಂಡಲೀಕ ಮರಾಠೆ,ಜೊತೆ ಕಾರ್ಯದರ್ಶಿ ಪ್ರಕಾಶ್ ಸುವರ್ಣ ಕಟಪಾಡಿ,ಪ್ರೆಸ್ ಕ್ಲಬ್ ಸಂಯೋಜಕ ಸಂತೋಷ್ ಕಾಪು ಹಾಗು ಸದಸ್ಯರು ಉಪಸ್ಥಿತರಿದ್ದರು.

Reach Count: 
1960