Error message

  • Notice: Constant PUBLIC_NEXT_APP_USER_TRENDING_VIDEOS_PARAMETER_DURATION_IN_SECONDS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).
  • Notice: Constant TRENDING_VIDEO_MIN_LENGTH_IN_SECS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).

Kshetra Samachara

Local News Subject: 
ಧಾರವಾಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ ಡಿಸಿ
City: 
Hubballi-Dharwad
Upload Image: 
PublicNext-474033-513327-Hubballi-Dharwad-Health-and-Fitness-Government-COVID-node
Category: 
Health & Fitness
Government
COVID
Body: 

ಧಾರವಾಡ: ಕೊರೊನಾ ನಿಯಂತ್ರಣ ಸಂಬಂಧ ರಾಜ್ಯದ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳನ್ನು ರಾಜ್ಯ ಸರ್ಕಾರ ಅನ್‌ಲಾಕ್ ಮಾಡಿದೆ. ಅನ್‌ಲಾಕ್ ಆದ ಜಿಲ್ಲೆಗಳಲ್ಲಿ ಧಾರವಾಡ ಜಿಲ್ಲೆ ಕೂಡ ಒಂದು. ಧಾರವಾಡ ಜಿಲ್ಲೆಯಲ್ಲೂ ಕೂಡ ಕೊರೊನಾ ನಿಯಂತ್ರಣಕ್ಕೆ ತರುವ ಸಂಬಂಧ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿ ಮಾಡಿದ್ದಾರೆ.

ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಆದರೂ ಕೆಲವೊಂದಿಷ್ಟು ರಿಯಾಯ್ತಿ ನೀಡಲಾಗಿದೆ. ಉಳಿದ ದಿನಗಳಲ್ಲಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದ್ದು, ನೈಟ್ ಕರ್ಫ್ಯೂ ಕೂಡ ಜಾರಿ ಮಾಡಿದ್ದಾರೆ. ಯಾವ್ಯಾವುದಕ್ಕೆ ರಿಯಾಯ್ತಿ ನೀಡಿದ್ದಾರೆ ಎಂಬುದರ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ನೈಟ್ ಕರ್ಫ್ಯೂ ವೇಳೆ ಸಂಜೆ 7 ಗಂಟೆಯಿಂದ ಬೆಳಗಿನ 5 ಗಂಟೆಯವರೆಗೆ ವ್ಯಕ್ತಿಗಳ ಚಲನೆಯನ್ನು ನಿಷೇಧಿಸಲಾಗಿದೆ. ತುರ್ತು ಅಗತ್ಯವಿರುವ ರೋಗಿಗಳು, ಅವರ ಪರಿಚಾರಕರು ಹಾಗೂ ರೋಗಿಯನ್ನು ಸ್ಥಳಾಂತರಿಸುವುದಕ್ಕೆ ಅವಕಾಶ ನೀಡಲಾಗಿದೆ. ರಾತ್ರಿ ವೇಳೆ ಅಗತ್ಯ ಕೈಗಾರಿಕೆಗಳು ಹಾಗೂ ಕಂಪೆನಿಗಳಿಗೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಅಂತಹ ಸಂಸ್ಥೆಯ ನೌಕರರು ತಮ್ಮ ಗುರುತಿನ ಚೀಟಿ ತೋರಿಸಿ ಸಂಚರಿಸಬಹುದಾಗಿದೆ. ಟೆಲಿಕಾಂ ಹಾಗೂ ಇಂಟರ್‌ನೆಟ್ ಸೇವಾ ಪೂರೈಕೆದಾರರ ನೌಕರರು ಆಯಾ ವಾಹನಗಳು ಸಂಸ್ಥೆ ನೀಡುವ ಗುರುತಿನ ಚೀಟಿ ತೋರಿಸಿ ಸಂಚರಿಸಬಹುದಾಗಿದೆ. ಔಷಧ ಕಂಪೆನಿಗಳು ಕಾರ್ಯ ನಿರ್ವಹಿಸುತ್ತವೆ. ಇತರ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ತುರ್ತು ಸೇವೆಗಳಿಗೆ ನಿರ್ಬಂಧ ಹೇರಲಾಗಿಲ್ಲ. ಸರಕು ಸಾಗಾಣಿಕೆಗೂ ಯಾವುದೇ ನಿರ್ಬಂಧ ಇರುವುದಿಲ್ಲ. ರೈಲು ಮತ್ತು ವಿಮಾನ ಸಂಚಾರಕ್ಕೆ ನಿರ್ಬಂಧ ಇರುವುದಿಲ್ಲ.

ವೀಕೆಂಡ್ ಕರ್ಫ್ಯೂ ವೇಳೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. 24X7 ಅಗತ್ಯವಿರುವ ಎಲ್ಲಾ ಕೈಗಾರಿಕೆ, ಕಂಪೆನಿಗಳು ಹಾಗೂ ಸಂಸ್ಥೆಗಳ ಕಾರ್ಯಕ್ಕೆ ಅನುಮತಿ ನೀಡಲಾಗಿದೆ. ಅಂತಹ ಕಂಪೆನಿ ನೌಕರರು ತಮ್ಮ ಗುರುತಿನ ಚೀಟಿ ನೀಡಿ ಪ್ರಯಾಣಿಸಬಹುದು. ದಿನಸಿ, ಹಣ್ಣು, ಡೇರಿ, ಮಾಂಸ ಮಾರಾಟ, ಹಾಲು ಮಾರಾಟಕ್ಕೆ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಮದ್ಯದ ಅಂಗಡಿಗಳು ಸಹ ವೀಕೆಂಡ್ ಕರ್ಫ್ಯೂ ವೇಳೆಯೂ ಮಧ್ಯಾಹ್ನ 2 ಗಂಟೆಯವರೆಗೂ ಪಾರ್ಸೆಲ್ ನೀಡಬಹುದು. ಹೋಟೆಲ್ ಗಳಿಗೆ ಪಾರ್ಸೆಲ್ ಹಾಗೂ ಹೋಮ್ ಡೆಲಿವರಿಗೆ ಅವಕಾಶ ನೀಡಲಾಗಿದೆ. ರೈಲು, ವಿಮಾನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿಲ್ಲ. ಸಾರಿಗೆ ವಾಹನಗಳ ಸಂಚಾರಕ್ಕೂ ಅವಕಾಶ ನೀಡಲಾಗಿದ್ದು, ಕೋವಿಡ್ ನಿಯಮಾವಳಿ ಪ್ರಕಾರ ಸಾರಿಗೆ ವಾಹನಗಳ ಸಂಚಾರ ನಡೆಯಲಿದೆ. ಶವ ಸಂಸ್ಕಾರಕ್ಕೆ ಗರಿಷ್ಠ 5 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

Reach Count: 
111773