Error message

  • Notice: Constant PUBLIC_NEXT_APP_USER_TRENDING_VIDEOS_PARAMETER_DURATION_IN_SECONDS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).
  • Notice: Constant TRENDING_VIDEO_MIN_LENGTH_IN_SECS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).

Kshetra Samachara

Local News Subject: 
ಹುಬ್ಬಳ್ಳಿ: ಪಕ್ಷೇತರ ಅಭ್ಯರ್ಥಿಗಳಿಗೆ ಮಾತ್ರವೆ ಕೊರೊನಾ ರೂಲ್ಸ್ : ಶಾಸಕರಿಗೆ ಎಲ್ಲವೂ ಮಾಫ್
City: 
Hubballi-Dharwad
Video Thumbnail: 
PublicNext--587612--node-nid
Category: 
Politics
Crime
Law and Order
Body: 

ಹುಬ್ಬಳ್ಳಿ- ಮಹಾನಗರ ಪಾಲಿಕೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಎಂದಿನಂತೆ ವಾರ್ಡ್ ನಂಬರ್ 82 ರ ಪಕ್ಷೇತರ ಅಭ್ಯರ್ಥಿ ಪರ ಪ್ರಚಾರ ವೇಳೆ, ಬೆಂಡಿಗೇರಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ಯಾಮರಾವ್ ಸಜ್ಜನ ಅವರು ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ಮಾಡಿರುವ ಆರೋಪ ಕೇಳಿ ಬಂದಿದೆ‌.

ಜಿಲ್ಲಾಧಿಕಾರಿ ಕೊರೊನಾ ರೂಲ್ಸ್ ಬ್ರೇಕ್ ಮಾಡಿದ ಅಭ್ಯರ್ಥಿಗಳಿಗೆ ನೋಟೀಸ್ ನೀಡುವ ಕುರಿತು ಆದೇಶ ನೀಡಿದ್ದಾರೆ. ಅದರಂತೆ ವಾರ್ಡ್ ನಂಬರ್ 82 ರ ಪಕ್ಷೇತರ ಅಭ್ಯರ್ಥಿ ಅಕ್ಷತಾ ಮೋಹನ ಅಸುಂಡಿ ಅವರ ಪರವಾಗಿ ವಾರ್ಡ್ ನಲ್ಲಿ ಪ್ರಚಾರ ಮಾಡುತ್ತಿದ್ದರು ಈ ವೇಳೆ ಆಗಮಿಸಿದ ಬೆಂಡಿಗೇರಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಜ್ಜನ್, ಏಕಾಏಕಿ ಸಾರ್ವಜನಿಕರು ಹಾಗೂ ಅಭ್ಯರ್ಥಿಗಳಿಗೆ ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದರಿಂದ ನಿಮ್ಮ ಮೇಲೆ ಪ್ರಕರಣ ದಾಖಲಿಸುತ್ತೆವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ನಾಯಕರು ಹಾಗೂ ಶಾಸಕರು ಬಂದು ನೂರಾರು ಜನರೊಂದಿಗೆ ಪ್ರಚಾರ ಮಾಡಿದ್ದಾರೆ, ಅವಾಗ ನೀವು ಏಕೆ ಬರಲಿಲ್ಲ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದಾಗ, ಇನ್ಸ್ಪೆಕ್ಟರ್ ಸಜ್ಜನ್ ಸಾರ್ವಜನಿಕರಿಗೆ ತಿಳಿ ಹೇಳುವ ಕೆಲಸ ಮಾಡದೆ ಅಲ್ಲೆ ಇದ್ದ ವ್ಯಕ್ತಿಗೆ ಅವಾಚ್ಯ ಶಬ್ದ ದಿಂದ ನಿಂದನೇ ಮಾಡಿ ಹಲ್ಲೆಗೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ‌.

ಇದೆಲ್ಲವನ್ನೂ ನೋಡಿದರೆ ರಾಜಕೀಯವರ ಕೈವಾಡವಿದೆ, ಪಕ್ಷೇತರ ಅಭ್ಯರ್ಥಿ ಗೆಲ್ಲುತ್ತಾರೆ ಎಂಬ ಭಯದಿಂದ ಇಂತಹ ಕೆಲಸ ಮಾಡುತ್ತಿದ್ದಾರೆ. ನ್ಯಾಯ ಎಲ್ಲರಿಗೂ ಒಂದೆ, ಅಧಿಕಾರ ಇದೆ ಅಂತ ಪೊಲೀಸರ ಮೂಲಕ ದರ್ಪ ಮಾಡದ್ರೆ ನಾವೂ ಕೈ ಕಟ್ಟಿ ಕುಳಿತುಕೊಳ್ಳುವುದಿಲ್ಲ ಮುಂದೆ ಇದೆ ರೀತಿ ಮಾಡಿದ್ರೆ ಜಿಲ್ಲಾಧಿಕಾರಿ ಕಛೇರಿ ಎದುರುಗಡೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ಪಕ್ಷಗಳ ಮಾತನ್ನು ಕೇಳಿ ಪಕ್ಷೇತರ ಅಭ್ಯರ್ಥಿಗಳಿಗೆ ಪೊಲೀಸರು ಇಷ್ಟು ತೊಂದರೆ ಕೊಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಹಲವಾರು ಪಕ್ಷೇತರ ಅಭ್ಯರ್ಥಿಗಳ ಅಳಲಾಗಿದೆ.

Reach Count: 
114971
Show Detail Screen Advertisement: 
Yes