Error message

  • Notice: Constant PUBLIC_NEXT_APP_USER_TRENDING_VIDEOS_PARAMETER_DURATION_IN_SECONDS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).
  • Notice: Constant TRENDING_VIDEO_MIN_LENGTH_IN_SECS already defined in require_once() (line 662 of /var/www/html/electreps/sites/all/modules/public_next_mobile_json_api/inc/public_next_mobile_json_api_constants.inc).

PublicNext

News Subject: 
ರಾಜ್ಯದ 9 ಜಿಲ್ಲೆಗಳಲ್ಲಿ ಇಂದು ಕೊರೊನಾ '0': ಒಟ್ಟು 332 ಜನರಿಗೆ ಸೋಂಕು ದೃಢ
Upload Image: 
PublicNext--633565--node-nid
Category: 
Health & Fitness
COVID
Body: 

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಂದು ಭಾರಿ ಇಳಿಕೆ ಕಾಣುತ್ತಿದೆ. ವಿಶೇಷವೆಂದರೆ ಇಂದು ಒಂಬತ್ತು ಜಿಲ್ಲೆಗಳಲ್ಲಿ ಒಂದೇ ಒಂದು ಕೋವಿಡ್ ಕೇಸ್‌ ಪತ್ತೆಯಾಗಿಲ್ಲ.

ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 332 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,81,732 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.41ಕ್ಕೆ ಕುಸಿದಿದೆ. ಇಂದು 79,177 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 515 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,34,085 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 11 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,906ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 9,712 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 3.31ನಷ್ಟಿದೆ.

ಬೆಂಗಳೂರು: ನಗರದಲ್ಲಿ ಇಂದು 145 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,48,604ಕ್ಕೆ ಏರಿಕೆಯಾಗಿದೆ 125 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,25,810ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಐವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,198 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,595 ಸಕ್ರಿಯ ಪ್ರಕರಣಗಳಿವೆ.

Reach Count: 
29017
Show Detail Screen Advertisement: 
Yes